ಶಿವಮೊಗ್ಗ ಭಾರತ ದೇಶದ ಕರ್ನಾಟಕ ರಾಜ್ಯದ ಒಂದು ನಗರ. ಇದು ಕರ್ನಾಟಕದ ರಾಜಧಾನಿಯಾದ ಬೆಂಗಳೂರು ನಗರದಿಂದ ೨೭೫ ಕಿಮೀ ದೂರದಲ್ಲಿದೆ. ಶಿವಮೊಗ್ಗ ಮಹಾನಗರವು ಈ ಜಿಲ್ಲೆಯ ರಾಜಧಾನಿಯಾಗಿದೆ. ಶಿವಮೊಗ್ಗ ಜಿಲ್ಲೆ ಕರ್ನಾಟಕದ ನಿಸರ್ಗಭರಿತ ಮಲೆನಾಡಿನ ಒಂದು ಭಾಗವಾಗಿದೆ.
ಸಹ್ಯಾದ್ರಿ ಪರ್ವತಶ್ರೇಣಿ ಮತ್ತು ಅಲ್ಲಿ ಉಗಮಗೊಳ್ಳುವ ನದಿ-ಉಪನದಿಗಳು ಶಿವಮೊಗ್ಗಕ್ಕೆ ಯಥೇಚ್ಛ ನೈಸರ್ಗಿಕ ಸೌಂದರ್ಯವನ್ನು ತಂದುಕೊಟ್ಟಿವೆ. ಶಿವಮೊಗ್ಗದಿಂದ ೧೧೩ ಕಿಮೀ ದೂರದಲ್ಲಿರುವ ಜಗತ್ಪ್ರಸಿದ್ಧ ಜೋಗದ ಜಲಪಾತ ಪ್ರಕೃತಿಯ ಒಂದು ಅಪೂರ್ವ ದೃಶ್ಯ. ಇಲ್ಲಿ ಶರಾವತಿ ನದಿ ೨೩೫ ಮೀ ಎತ್ತರದಿಂದ ಸುಮನೋಹರವಾಗಿ ಧುಮುಕುತ್ತದೆ. ರಾಜ, ರಾಣಿ, ರೋರರ್ ಮತ್ತು ರಾಕೆಟ್ ಎಂಬ ನಾಲ್ಕು ವಿಭಿನ್ನ ಪ್ರವಾಹಗಳಾಗಿ ಧುಮುಕುವ ಶರಾವತಿ ಏಷ್ಯದ ಅತಿ ಎತ್ತರದ ಜಲಪಾತವನ್ನು ನಿರ್ಮಿಸಿದೆ. ಮಳೆಗಾಲದ ಸಮಯದಲ್ಲಿ ಕಾಮನ ಬಿಲ್ಲುಗಳನ್ನು ನಿರ್ಮಿಸಿಕೊಂಡು ಅತ್ಯದ್ಭುತ ದೃಶ್ಯವನ್ನು ಜಲಪಾತ ಪ್ರದರ್ಶಿಸುತ್ತದೆ.
ತುಂಗಭದ್ರಾ, ಶರಾವತಿ, ಕುಮುದ್ವತಿ ಮತ್ತು ಇತರ ನದಿಗಳಿಂದ ಜಲಸರಬರಾಜಿನ ಸೌಕರ್ಯವುಳ್ಳ ಶಿವಮೊಗ್ಗ ಜಿಲ್ಲೆ ಕರ್ನಾಟಕದ ಅನ್ನದ ಬಟ್ಟಲು ಎನ್ನಿಸಿಕೊಂಡಿದೆ.
ಪರಿವಿಡಿ |
ಶಿವಮೊಗ್ಗ ಎಂಬ ಹೆಸರು 'ಶಿವ-ಮುಖ' ಎಂಬ ಪದಪುಂಜದಿಂದ ಬಂದದ್ದು. ಇನ್ನೊಂದು ವ್ಯುತ್ಪತ್ತಿಯಂತೆ ಇದು 'ಸಿಹಿ-ಮೊಗೆ' (ಸಿಹಿಯಾದ Moggu) ಎಂದಿದ್ದು ಅದು 'ಶಿವಮೊಗ್ಗ'ವಾಗಿ ಮಾರ್ಪಾಟುಹೊಂದಿದೆ.ಈ ಪ್ರದೇಶವು ಕ್ರಿ.ಪೂ. ೩ನೇ ಶತಮಾನದಲ್ಲಿ ಸಾಮ್ರಾಟ್ ಅಶೋಕನ ಮೌರ್ಯ ಸಾಮ್ರಾಜ್ಯದ ದಕ್ಷಿಣದ ತುದಿಯಾಗಿದ್ದಿತು. ಮುಂದಿನ ಶತಮಾನಗಳಲ್ಲಿ ಅನೇಕ ರಾಜಮನೆತನಗಳ ಆಳ್ವಿಕೆಯಲ್ಲಿ ಈ ಪ್ರದೇಶ ಇದ್ದಿತು: ೪ನೇ ಶತಮಾನದಲ್ಲಿ ಕದಂಬರು, ೬ನೇ ಶತಮಾನದಲ್ಲಿ ಚಾಲುಕ್ಯರು ಮತ್ತು ಅವರ ಸಾಮಂತರಾದ ಗಂಗರು, ೮ನೇ ಶತಮಾನದಲ್ಲಿ ರಾಷ್ಟ್ರಕೂಟರು, ೧೧ನೇಯದರಲ್ಲಿ ಹೊಯ್ಸಳರು ಮತ್ತು ೧೫ನೇ ಶತಮಾನದಲ್ಲಿ ವಿಜಯನಗರದ ಅರಸರು ಈ ಪ್ರದೇಶವನ್ನು ಆಳಿದೆ ರಾಜಮನೆತನಗಳಲ್ಲಿ ಪ್ರಮುಖರು. ಶಿವಮೊಗ್ಗ ನಗರಕ್ಕೆ ಸ್ವತಂತ್ರ ವ್ಯಕ್ತಿತ್ವ ಬಂದದ್ದು ೧೬ನೇ ಶತಮಾನದ ಕೆಳದಿ ನಾಯಕರ ಆಳ್ವಿಕೆಯಲ್ಲಿ. ೧೭ನೇ ಶತಮಾನದ ನಂತರ ಭಾರತ ಸ್ವಾತಂತ್ರ್ಯದ ವರೆಗೂ ಶಿವಮೊಗ್ಗ ಮೈಸೂರು ಸಂಸ್ಥಾನದ ಭಾಗವಾಗಿದ್ದಿತು.
ಜಲಪಾತಗಳು ಮತ್ತು ಅಣೆಕಟ್ಟುಗಳು
ಶಿವಮೊಗ್ಗ ವಿಮಾನ ನಿಲ್ದಾಣ ,10km from ಶಿವಮೊಗ್ಗ
| ತಾಲ್ಲೂಕು | ಎತ್ತರ (ಮಿ.) | ಹೋಬಳಿಗಳ ಸಂಖ್ಯೆ | ನಿವಾಸಿತ ಹಳ್ಳಿಗಳ ಸಂಖ್ಯೆ | ಅನಿವಾಸಿತ ಹಳ್ಳಿಗಳ ಸಂಖ್ಯೆ | ವಿಸ್ತಿರಣ (ಚ. ಕಿ.ಮಿ) |
|---|---|---|---|---|---|
| ತೀರ್ಥಹಳ್ಳಿ | ೬೧೦ | ೫ | ೨೪೫ | ೨ | ೧೨೪೭ |
| ಭಧ್ರಾವತಿ | ೫೯೪ | ೬ | ೧೪೬ | ೭ | ೬೯೦ |
| ಶಿಕಾರಿಪುರ | ೬೦೩ | ೫ | ೧೫೩ | ೨೨ | ೯೦೯ |
| ಶಿವಮೊಗ್ಗ | ೫೭೧ | ೮ | ೧೯೮ | ೨೪ | ೧೧೦೮ |
| ಸಾಗರ | ೫೭೯ | ೬ | ೨೩೩ | ೫ | ೧೯೪೦ |
| ಸೊರಬ | ೫೭೯ | ೬ | ೨೬೮ | ೩೮ | ೧೧೪೮ |
| ಹೊಸನಗರ | ೫೭೨ | ೪ | ೧೯೭ | ೫ | ೧೪೨೩ |
Why are we here?
All text is available under the terms of the GNU Free Documentation License
This page is cache of Wikipedia. History